ಶಾಲಾ ಶೌಚಾಲಯದಲ್ಲಿ ಕಂಡ ರಕ್ತ;* *ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮುಟ್ಟು ಹುಡುಕಿದ ಶಿಕ್ಷಕರು!*
*ಶಾಲಾ ಶೌಚಾಲಯದಲ್ಲಿ ಕಂಡ ರಕ್ತ;*
*ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮುಟ್ಟು ಹುಡುಕಿದ ಶಿಕ್ಷಕರು!*
ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ, ಯಾರು ಮುಟ್ಟಾಗಿದ್ದಾರೆಂದು ತಿಳಿಯಲು ಮುಖ್ಯ ಶಿಕ್ಷಕರು ಎಲ್ಲಾ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿರುವ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯೋಪಾಧ್ಯಾಯರು ಹಾಗೂ ಓರ್ವ ಸಹಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆ ಶಾಲೆಯಲ್ಲಿ ಐದರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು. ಶಿಕ್ಷಕರು ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿ ಯಾರು ಮುಟ್ಟಾಗಿದ್ದಾರೆಂದು ತಿಳಿದುಕೊಳ್ಳಲು ಪ್ರಯತ್ನಿಸಿದ್ದು, ಪೋಷಕರಲ್ಲಿ ಆಕ್ರೋಶವನ್ನುಂಟುಮಾಡಿದೆ.
ಮಂಗಳವಾರ ಘಟನೆ ನಡೆದಿದೆ, ಪ್ರಾಂಶುಪಾಲರು 5 ರಿಂದ 10 ನೇ ತರಗತಿಯ ಹಲವಾರು ವಿದ್ಯಾರ್ಥಿನಿಯರನ್ನು ಶಾಲಾ ಸಭಾಂಗಣಕ್ಕೆ ಕರೆದು ಸ್ನಾನಗೃಹದ ನೆಲದ ಮೇಲೆ ಕಂಡುಬಂದ ರಕ್ತದ ಕಲೆ ಕಂಡುಬಂದಿರುವ ಕುರಿತು ಪ್ರಶ್ನೆಗಳನ್ನು ಕೇಳಿದ್ದರು ಎಂದು ಸಿಬ್ಬಂದಿ ಹೇಳಿದ್ದಾರೆ. ನಂತರ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ಮುಟ್ಟಾದವರು ಹಾಗೂ ಮುಟ್ಟಾಗದವರು ಹೀಗೆ ಎರಡು ಗುಂಪುಗಳಾಗಿ ವಿಂಗಡಿಸಲು ಹೇಳಿದ್ದರು.
10 ರಿಂದ 12 ವರ್ಷದೊಳಗಿನ ಕೆಲವು ಹುಡುಗಿಯರನ್ನು ಪರೀಕ್ಷಿಸಲು ಒಬ್ಬ ಮಹಿಳಾ ಪ್ಯೂನ್ ಅವರ ಬಳಿ ಕೇಳಲಾಗಿತ್ತು. ತಪಾಸಣೆ ಸಮಯದಲ್ಲಿ ಪ್ಯೂನ್ ಆಕೆಯ ಒಳ ಉಡುಪು ಮುಟ್ಟಿದಾಗ ಆಕೆ ಪ್ಯಾಡ್ ಹಾಕಿದ್ದಳು. ಆದರೆ ಮುಟ್ಟಾಗಿಲ್ಲ ಎಂದು ಹೇಳಿಕೊಂಡಿದ್ದಳು. ಆಕೆಯನ್ನು ಇತರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮುಂದೆ ಅವಮಾನಿಸಿದ್ದಾರೆ.
ಶಾಲಾ ಪ್ರಾಂಶುಪಾಲರು, ಒಬ್ಬ ಪಿಯೋನ್, ಇಬ್ಬರು ಶಿಕ್ಷಕರು ಮತ್ತು ಇಬ್ಬರು ಟ್ರಸ್ಟಿಗಳು ಸೇರಿದಂತೆ ಆರು ಜನರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಾಲೆಯ ಪ್ರಾಂಶುಪಾಲರು ಮತ್ತು ಪ್ಯೂನ್ ಬಂಧಿಸಲಾಗಿದ್ದು, ಉಳಿದ ನಾಲ್ವರ ವಿರುದ್ಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಒಬ್ಬ ಪ್ಯೂನ್ ಅವರನ್ನು ಬಂಧಿಸಲಾಗಿದ್ದು, ಉಳಿದವರ ವಿರುದ್ಧ ತನಿಖೆ ಮುಂದುವರೆದಿದೆ ಎಂದು ಮಹಾರಾಷ್ಟ್ರ ಪೊಲೀಸರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.