ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಜು.14 ರಂದು ಸಂಜೆ  ಚಾಲನೆ*

*‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಜು.14 ರಂದು ಸಂಜೆ  ಚಾಲನೆ*

ಶಿವಮೊಗ್ಗ

ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬAಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿಸುವ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು, ಜು.24 ರ ಸಂಜೆ 4 ಗಂಟೆಗೆ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಆರ್‌ಎಸ್ ಪಾರ್ಕ್ ನಲ್ಲಿ ‘ಮನೆ ಮನೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
ಸಮಾಜದಲ್ಲಿ ಆಗಬಹುದಾದ ಅಪರಾಧಗಳನ್ನು ತಡೆದು ಘಟಿಸಿದ ಅಪರಾಧಗಳನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡಲು ಹಾಗೂ ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಿ, ಇಲಾಖೆಯನ್ನು ಸಾರ್ವಜನಿಕ ಸ್ನೇಹಿಯಾಗಿಸಿ, ಸಮಾಜಕ್ಕೆ ಉತ್ತಮ ಸಕ್ರಿಯ ಪೊಲೀಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಹಾತ್ವಾಕಾಂಕ್ಷೆಯ ‘ಮನೆ-ಮನೆ ಪೊಲೀಸ್’ ಯೋಜನೆ ಜಾರಿಗೊಳಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.