ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ* *ಬಂದೋಬಸ್ತ್ ಗೆ ಸ್ವಯಂ ಸೇವಕರ ನೇಮಕ;* *ನೀವೂ ಅರ್ಜಿ ಸಲ್ಲಿಸಬಹುದು*

*ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ* *ಬಂದೋಬಸ್ತ್ ಗೆ ಸ್ವಯಂ ಸೇವಕರ ನೇಮಕ;*

*ನೀವೂ ಅರ್ಜಿ ಸಲ್ಲಿಸಬಹುದು*

ಮುಂಬರುವ *ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ* ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ *ಸ್ವಯಂ ಸೇವಕರಾಗಿ ಕರ್ತವ್ಯ* ನಿರ್ವಹಿಸಬಹುದಾಗಿದ್ದು, ಈ ಹಿನ್ನೆಲೆಯಲ್ಲಿ *ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ* ಸಾರ್ವಜನಿಕರು ಆಗಸ್ಟ್ 1 ರಿಂದ 15 ರವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಸಿ ನೋಂದಾಯಿಸಿಕೊಳ್ಳ ಬಹುದಾಗಿದೆ.

ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು *ಶಿವಮೊಗ್ಗ-ಎ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ,* ಭದ್ರಾವತಿ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು *ಭದ್ರಾವತಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ,* ಸಾಗರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು *ಸಾಗರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ,* ತೀರ್ಥಹಳ್ಳಿ ಮತ್ತು ಹೊಸನಗರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು *ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ* ಮತ್ತು ಸೊರಬ ಹಾಗೂ ಶಿಕಾರಿಪುರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು *ಶಿಕಾರಿಪುರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ* ತಮ್ಮ ವಿವರಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.