ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮಹತ್ವದ ಸಭೆ; ಸಿ ಎಂ ಸಿದ್ದರಾಮಯ್ಯರ ಮುಂದೆ ಏನೆಲ್ಲ ಚರ್ಚಿಸಿದರು ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲ ಕೃಷ್ಣ, ಬಿ.ಕೆ.ಸಂಗಮೇಶ್?
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮಹತ್ವದ ಸಭೆ;
ಸಿ ಎಂ ಸಿದ್ದರಾಮಯ್ಯರ ಮುಂದೆ ಏನೆಲ್ಲ ಚರ್ಚಿಸಿದರು ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲ ಕೃಷ್ಣ, ಬಿ.ಕೆ.ಸಂಗಮೇಶ್?

ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮಹತ್ವದ ಸಭೆಯಲ್ಲಿ ಭಾಗವಹಿಸಿದರು
ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾಗಿರುವ ಬೆಳೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಯ ಮಾಹಿತಿ ಪಡೆದು, ಅತಿವೃಷ್ಟಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಸರ್ಕಾರದ ಸವಲತ್ತುಗಳನ್ನು ಗರಿಷ್ಠ ಜನರಿಗೆ ತಲುಪಿಸುವ ಬಗ್ಗೆ ಸಲಹೆ ಸೂಚನೆ ನೀಡಿದರು.
ಜೊತೆಗೆ ವೈದ್ಯಕೀಯ, ಶಿಕ್ಷಣ, ರಸ್ತೆ, ಕುಡಿಯುವ ನೀರು, ಮೂಲಭೂತ ಸೌಕರ್ಯಗಳನ್ನು ಸೇರಿದಂತೆ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಹಾಗೂ ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿ ಅರ್ಹ ಫಲಾನುಭವಿಗೆ ತಲುಪಿಸುವ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟ ಮಾರ್ಗದರ್ಶನ ನೀಡಿದರು.
ಈ ವೇಳೆ ಭದ್ರಾವತಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕೆ.ಆರ್.ಐ.ಡಿ.ಎಲ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ಕೆ ಸಂಗಮೇಶ್, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಉಪಸ್ಥಿತರಿದ್ದರು.