ಚುನಾವಣೆ, ಗ್ಯಾರಂಟಿ ಮತ್ತು ಮಧು ಬಂಗಾರಪ್ಪ
ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದು ಮುಂದೆ ಸಾಗುತ್ತಿದೆ ಎಂದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ಶಿಕಾರಿಪುರದ ತಾಲೂಕು ಆಡಳಿತ ಸಭಾಂಗಣದ ಹಿಂಭಾಗದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು.
ಪೂಜ್ಯ ತಂದೆಯವರಾದ ಬಂಗಾರಪ್ಪನವರು ತಮ್ಮ ಅಧಿಕಾರ ಅವಧಿಯಲ್ಲಿ ಆಶ್ರಯ ಆರಾಧನಾ ಕೃಪಾಕದಂತಹ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದರು. ಮೂರು ದಶಕಗಳ ಹಿಂದೆ ರೈತರ ಪಂಪ್ಸೆಟ್ಟುಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆ ಎಂದು ಕೂಡ ಚಾಲ್ತಿಯಲ್ಲಿರುವುದು ಹರ್ಷದ ಸಂಗತಿಯಾಗಿದೆ. ರಾಜ್ಯ ಬರಗಾಲದಿಂದ ತತ್ತರಿಸುತ್ತಿರುವ ಸಂದರ್ಭದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಭತ್ತ ಜೋಳ ರಾಗಿಯಂತಹ ಬಿತ್ತನೆ ಬೀಜಗಳನ್ನು ಜಿಲ್ಲೆಯ ರೈತರ ಮನೆ ಬಾಗಿಲಿಗೆ ತಲುಪಿರುವುದು ವಿಶೇಷವಾಗಿತ್ತು. ಅಂತಹ ಜನನಾಯಕರ ಮಾರ್ಗದರ್ಶನದಂತೆ ಆಡಳಿತರೂಢ ಸರಕಾರ ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆ ಸಮಿತಿಯ ಸದಸ್ಯನಾಗಿದ್ದೆ ಎಂಬ ಹೆಮ್ಮೆ ನನಗಿದೆ ಎಂದರು.
ಮನೆ ಒಡತಿಗೆ 2000 ರೂ.ಗಳ ಸಹಾಯಧನ ನೀಡುವ ಗೃಹಲಕ್ಷ್ಮಿ, ರಾಜ್ಯದ ಪ್ರತಿ ಮನೆ ಮನೆಗೆ ಉಚಿತ ವಿದ್ಯುತ್ ಒದಗಿಸುವ ಗೃಹಜ್ಯೋತಿ, ಮುಂತಾದ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ.
ಎಂದ ಅವರು, ಇದು ನಿಮ್ಮದೇ ಸರ್ಕಾರ ಇದನ್ನು ಪೋಷಿಸಿ ಬೆಳೆಸುವ ಹೊಣೆಗಾರಿಕೆಯು ನಿಮ್ಮದೇ ಆಗಿದೆ ಎಂದವರು ನುಡಿದರು.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ದಿ ಪಡಿಸುವ ಉದ್ದೇಶ ಹೊಂದಲಾಗಿದೆ ಎಂದರು.