ವಿಶ್ವ ಆನೆಗಳ ದಿನಾಚರಣೆ – 2025* *ಆನೆ ಸಂರಕ್ಷಣೆ-ಸಹಭಾಳ್ವೆ ಸಂದೇಶ ಸಾರುವ ದಿನ* ಸಕ್ರೆಬೈಲು ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್‌ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ.
ವಿಶ್ವ ಆನೆಗಳ ದಿನಾಚರಣೆ – 2025*
*ಆನೆ ಸಂರಕ್ಷಣೆ-ಸಹಭಾಳ್ವೆ ಸಂದೇಶ ಸಾರುವ ದಿನ*
ಸಕ್ರೆಬೈಲು ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್‌ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ.
ಶಿವಮೊಗ್ಗ
ಆನೆ ಸಂರಕ್ಷಣೆ, ಮಾನವ- ಆನೆ ಸಂಘರ್ಷ ನಿರ್ವಹಣೆ ಮತ್ತು ಸಹಬಾಳ್ವೆಯ ಮಹತ್ವದ ಸಂದೇಶ ಸಾರುವ ಹಾಗೂ ಆನೆಗಳಿಗೆ ಗೌರವ ಸಲ್ಲಿಸುವ ದಿನ ‘ವಿಶ್ವ ಆನೆಗಳ ದಿನ’ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ ಟಿ ಹನುಮಂತಪ್ಪ ತಿಳಿಸಿದರು.
ಕರ್ನಾಟಕ ಅರಣ್ಯ ಇಲಾಖೆ, ಶಿವಮೊಗ್ಗ ವನ್ಯಜೀವಿ ವಿಭಾಗ, ಶಿವಮೊಗ್ಗ ವನ್ಯಜೀವಿ ಉಪ ವಿಭಾಗ ಸಕ್ರೆಬೈಲು ವನ್ಯಜೀವಿ ವಲಯ ಇವರ ವತಿಯಿಂದ ಮಂಗಳವಾರ ಸಕ್ರೆಬೈಲಿನಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಆನೆ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಕ್ರೆಬೈಲು ಆನೆ ಶಿಬಿರವು ತುಂಗಾ ನದಿಯ ದಂಡೆಯಲ್ಲಿ ಸ್ಥಾಪಿತವಾಗಿದ್ದು ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಪ್ರಕೃತಿ ಪ್ರಿಯರು ಮತ್ತು ವನ್ಯಜೀವಿ ಉತ್ಸಾಹಿಗಳಿಗೆ ಆನೆಗಳ ಜೀವನ ಕ್ರಮ ಹಾಗೂ ಸಂರಕ್ಷಣೆ ಕುರಿತು ತಿಳಿದುಕೊಳ್ಳುವುದರ ಜೊತೆಗೆ ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಅತ್ಯುತ್ತಮ ಸ್ಥಳವಾಗಿದೆ.
ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್‌ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ.
ಆನೆಗಳು ಆನೆ ಸೆರೆ ಕಾರ್ಯಾಚರಣೆ, ಉಪಟಳ ನೀಡುವ ಆನೆ ಹಿಮ್ಮೆಟ್ಟಿಸಲು ಹಾಗೂ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತವೆ. ಇಲ್ಲಿ ಚಾಣಾಕ್ಷ ಮಾವುತರು, ಸಿಬ್ಬಂದಿಗಳು ಇದ್ದಾರೆ.
ಆನೆಗಳ ಪ್ರಾಮುಖ್ಯತೆ, ಆನೆಗಳ ಸಾಧನೆಗಳು, ಕಾರ್ಯಾಚರಣೆಗಳು ಮತ್ತು ಅವುಗಳ ಇತಿಹಾಸ ಕುರಿತು ಮಾಹಿತಿಯುಳ್ಳ ನಾಮಫಲಕ ಅಳವಡಿಸುವ ಅಥವಾ ಮಾಹಿತಿ ಕೇಂದ್ರ ಸ್ಥಾಪಿಸುವ ಹಾಗೂ ವಿದ್ಯಾರ್ಥಿಗಳಿಗೆ ಪರಿಸರ, ಪ್ರಾಣಿಗಳು ಮಾನವ ಸಂಘರ್ಷ, ವನ್ಯಜೀವಿ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಶೈಕ್ಷಣಿಕ ಕಾರ್ಯಕ್ರಮ ಮಾಡುವ ಯೋಜನೆ ಕೂಡ ಇದೆ.
ಆನೆ ಬಿಡಾರದಿಂದ ರವಿ ಮತ್ತು ಶಿವ ಎಂಬ ಎರಡು ಆನೆಗಳನ್ನು ಮಧ್ಯ ಪ್ರದೇಶಕ್ಕೆ ಹಾಗೂ ಕೃಷ್ಣ ಮತ್ತು ಅಭಿಮನ್ಯು ಎಂಬ ಆನೆಗಳನ್ನು ಆಂಧ್ರ ಪ್ರದೇಶಕ್ಕೆ ಕಳುಹಿಸಿಕೊಡಲಾಗಿದೆ. ಮಾನವ-ಆನೆ ಸಂಘರ್ಷ, ಆನೆಗಳ ಭಾವನಾತ್ಮಕ ಸಂಬAಧಗಳು, ಅವುಗಳ ಸಾಧನೆ, ಆನೆಗಳ ನಿಜವಾದ ಪ್ರಾಮುಖ್ಯತೆ ಕುರಿತು ಮಾಹಿತಿ ಫಲಕ ಹಾಗೂ ಶಿಕ್ಷಣ, ಸಂಶೋಧನೆ, ದತ್ತು ಇತರೆ ಯೋಜನೆಗಳನ್ನು ಶೀಘ್ರದಲ್ಲೇ ರೂಪಿಸಲಾಗುವುದು ಎಂದರು.
ಡಿಸಿಎಫ್ ಪ್ರಸನ್ನಕೃಷ್ಣ ಪಟಗಾರ್ ಮಾತನಾಡಿ, ತಮ್ಮ ಹಿಂಡುಗಳನ್ನು ಮುನ್ನಡೆಸುವ ಹಾಗೂ ಮಾರ್ಗದರ್ಶನ ನೀಡುವ ಹೆಣ್ಣು ಆನೆಗಳು ಮತ್ತು ಅವು ಹಂಚಿಕೊಳ್ಳುವ ಆಳವಾದ ಹಾಗೂ ಶಾಶ್ವತವಾದ ನೆನಪುಗಳ ಹಿನ್ನೆಲೆ ‘ಮಾತೃ ಪ್ರಧಾನರು ಮತ್ತು ನೆನಪುಗಳು’ ಎಂಬ ಧ್ಯೇಯವಾಕ್ಯದೊಂದಿಗೆ ಇಂದಿನ ವಿಶ್ವ ಆನೆಗಳ ದಿನವನ್ನುಆಚರಿಸಲಾಗುತ್ತಿದೆ. ಹಿಂಡನ್ನು ಮುನ್ನಡೆಸುವ ಹೆಣ್ಣು ಆನೆಯು ತನ್ನ ವಿಶೇಷವಾದ ನೆನಪಿನ ಶಕ್ತಿಯಿಂದ ಗುಂಪಿನ ಎಲ್ಲರಿಗೆ ನೀರು, ಆಹಾರ ಒದಗಿಸಲು ಸಹಕರಿಸುತ್ತದೆ ಎಂದರು.
ವಿಶ್ವ ಆನೆಗಳ ದಿನಾಚರಣೆ ಪ್ರಯುಕ್ತ ಭಾರತೀಯ ಅಂಚೆ ಇಲಾಖೆಯ ಸಹಯೋಗದೊಂದಿಗೆ ವಿಶೇಷ ಅಂಚೆ ಲಕೋಟೆ ತಯಾರಿಸಿ ಬಿಡುಗಡೆಗೊಳಿಸಲಾಗುತ್ತಿದೆ. ಮಾನವ ಆನೆ ಸಂಘರ್ಷದಿAದ ಬಾಧಿತ ಕಾಡಂಚಿನ ಸಮುದಾಯಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಜಾಗೃತಿ ಮೂಡಿಸಲು ಪುರದಾಳು, ಹೆದ್ದಾರಿಪುರ, ಬೆಳ್ಳೂರು ಶಾಲೆಗಳಲ್ಲಿ ಚಿತ್ರಕಲೆ, ಪ್ರಬಂಧ ಮತ್ತು ಪೋಸ್ಟರ್ ರಚನೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ಸಕ್ರೆಬೈಲು ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಆನೆ ಮುಖವಾಡಗಳನ್ನು ಧರಿಸಿ ಜಾಥಾ ಮಾಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಗೆ, ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಿಗೆ ಆನೆ ತಜ್ಞರೊಂದಿಗೆ ವಿಶೇಷ ವೆಬಿನಾರ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಅAಚೆ ಲಕೋಟೆ ಬಿಡುಗಡೆ : ಕಾರ್ಯಕ್ರಮದಲ್ಲಿ ವಿಶ್ವ ಆನೆ ದಿನಾಚರಣೆ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಲಾಯಿತು.
ಅಂಚೆ ಇಲಾಖೆ ಅಂಚೆ ಅಧೀಕ್ಷಕರಾದ ಜಯರಾಂ ಶೆಟ್ಟಿ ಮಾತನಾಡಿ, ವಿಶ್ವ ಆನೆ ದಿನಾಚರಣೆ 2025 ರ ಸ್ಮರಣಾತ್ಮಕವಾಗಿ ಈ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಲಾಗಿದೆ. ಈ ಲಕೋಟೆ ನಿಗದಿತ ಸಂಖ್ಯೆ ಅಂದರೆ 2000 ಸಂಖ್ಯೆಯಲ್ಲಿ ಮಾತ್ರ ಇದ್ದು, ಇದರ ಮೌಲ್ಯ ರೂ.30 ಆಗಿದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾರಾಟ ಮಾಡಲಾಗುತ್ತದೆ. ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ ಸಕ್ರೆಬೈಲಿನ ಆನೆ ಬಿಡಾರದ ಮಾಹಿತಿಯನ್ನು ಲಕೋಟೆ ಮೂಲಕ ಬಿತ್ತರಿಸಲಾಗುತ್ತದೆ. ಈ ಲಕೋಟೆ ಲಭ್ಯತೆ ಸೀಮಿತವಾಗಿರುವ ಕಾರಣಕ್ಕೆ ಮುಂದೆ ಇದರ ಮೌಲ್ಯ ವೃದ್ದಿಯಾಗುತ್ತಾ ಹೋಗುತ್ತದೆ ಎಂದು ಮಾಹಿತಿ ನೀಡಿದರು.
ಆನೆಮರಿಗಳ ನಾಮಕರಣ:
ಶಿಬಿರದ ತುಂಬಾ ಸಂಭ್ರಮದ-ಹಬ್ಬದ ವಾತಾವರಣ ಮೂಡಿತ್ತು. ಆನೆಗಳನ್ನು ಬಣ್ಣದ ಚಿತ್ತಾರದೊಂದಿಗೆ ಅಲಂಕರಿಸಿ, ಇಷ್ಟವಾದ ತಿನಿಸುಗಳೊಂದಿಗೆ ಆಚರಣೆ ನಡೆಯಿತು. ಪೂಜಾ ವಿಧಿವಿಧಾನಗಳನ್ನೂ ನಡೆಸಲಾಯಿತು. ಈ ವೇಳೆ ನೇತ್ರಾವತಿ ಮತ್ತು ಭಾನುಮತಿ ಆನೆಗಳಿಗೆ ಜನಿಸಿದ ಹೆಣ್ಣು ಆನೆ ಮರಿಗಳಿಗೆ ಕ್ರಮವಾಗಿ ಚಾಮುಂಡಿ ಮತ್ತು ತುಂಗಾ ಎಂದು ನಾಮಕರಣ ಮಾಡಲಾಯಿತು. ಎಲ್ಲ ಆನೆಗಳಿಗೆ ಅವುಗಳಿಗೆ ಇಷ್ಟವಾದ ಫಲ-ತರಕಾರಿಗಳನ್ನು ತಿನ್ನಿಸಿ ಸಂಭ್ರಮಿಸಲಾಯಿತು. ಆನೆ ಪ್ರಿಯ ಸಾರ್ವಜನಿಕರು, ಮಕ್ಕಳು ಆನೆಗಳ ಲೋಕದಲ್ಲಿ ವಿಹರಿಸುತ್ತಿದ್ದ ದೃಶ್ಯ ಕಂಡು ಬಂದಿತು.
ಕಾರ್ಯಕ್ರಮದಲ್ಲಿ ಎಸಿಎಫ್ ವಿಜಯಕುಮಾರ್, ಆರ್‌ಎಫ್‌ಒ ವಿನಯ್ ಜೆ ಆರ್, ಇತರೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.