ಕರ್ನಾಟಕ ಮುಜರಾಯಿ ದೇವಸ್ಥಾನಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ* *ಉಲ್ಲಂಘಿಸಿದರೆ ಬೀಳುತ್ತೆ ದಂಡ* *ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದ ಸಚಿವರು*

*ಕರ್ನಾಟಕ ಮುಜರಾಯಿ ದೇವಸ್ಥಾನಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ*

*ಉಲ್ಲಂಘಿಸಿದರೆ ಬೀಳುತ್ತೆ ದಂಡ*

*ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದ ಸಚಿವರು*

ಇಂದಿನಿಂದ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಸ್ಥಾನಗಳಲ್ಲಿ (Muzrai Temples) ಪ್ಲಾಸ್ಟಿಕ್ ಬಳಕೆ (Plastic Ban) ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದರು.

ರಾಮನಗರದಲ್ಲಿ ಮಾತನಾಡಿದ ಅವರು, ದೇವಸ್ಥಾನ ಆವರಣದ ಒಳಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ದೇಗುಲಗಳ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸುತ್ತವೆ ಎಂದು ತಿಳಿಸಿದರು.

ಪರಿಸರ ಸ್ವಚ್ಛತೆ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ದೇಗುಲಗಳಲ್ಲಿ ಪ್ಲಾಸ್ಟಿಕ್ ನಿಷೇಧ ವಿಚಾರವಾಗಿ ಗುರುವಾರವಷ್ಟೇ ವಿಧಾನಪರಿಷತ್ ಕಲಾಪದಲ್ಲಿಯೂ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದರು.

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೊಳಿಸಲಾಗುತ್ತಿದೆ. ಒಂದು ವೇಳೆ ಇದನ್ನು ಉಲ್ಲಂಘಿಸುವುದು ಕಂಡು ಬಂದರೆ ದಂಡ ವಿಧಿಸುವಂತೆ ದೇಗುಲಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಪರಿಷತ್ತಿನಲ್ಲಿ ತಿಳಿಸಿದ್ದರು.

ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂಬುದಾಗಿಯೂ ಸಚಿವರು ವಿಧಾನಸಭೆಯಲ್ಲಿ ಗುರುವಾರ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಕನ್ನಡದ ಶ್ಲೋಕದ ಬಗ್ಗೆ ಪ್ರಸ್ತಾಪಿಸಿದ್ದರು.

ಅದಕ್ಕೆ ಉತ್ತರಿಸಿದ ರಾಮಲಿಂಗಾ ರೆಡ್ಡಿ, ಕನ್ನಡದಲ್ಲಿ ಶ್ಲೋಕಗಳನ್ನು ಅಭ್ಯಾಸ ಮಾಡಲು ಸೂಚನೆ ಕೊಡುತ್ತೇವೆ ಎಂದಿದ್ದಾರೆ.