ಆಗಸ್ಟ್ 20: ಜಿಲ್ಲಾ ಕಾಂಗ್ರೆಸ್ ನಿಂದ  ಡಿ.ದೇವರಾಜ ಅರಸು/ ರಾಜೀವ್ ಗಾಂಧಿ ಜಯಂತಿ

ಆಗಸ್ಟ್ 20: ಜಿಲ್ಲಾ ಕಾಂಗ್ರೆಸ್ ನಿಂದ  ಡಿ.ದೇವರಾಜ ಅರಸು/ ರಾಜೀವ್ ಗಾಂಧಿ ಜಯಂತಿ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಆಗಸ್ಟ್ 20 ರಂದು ಹಿಂದುಳಿದ ವರ್ಗಗಳ ಆಶಾಕಿರಣ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಾಗೂ ಭಾರತರತ್ನ ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ ದಿನ ಬೆಳಿಗ್ಗೆ 10.00 ಘಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನಕುಮಾರ್ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಶಾಸಕರು,ಮಾಜಿ ಶಾಸಕರು, ನಿಗಮ-ಮಂಡಳಿಗಳ ಅಧ್ಯಕ್ಷರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು,ಪದಾಧಿಕಾರಿಗಳು, ಪಕ್ಷದ ಮುಖಂಡರು,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಲ್ಲಿದ್ದಾರೆ.