ಫೆ.27; ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ (ಪತ್ರಿಕಾಗೋಷ್ಠಿಯ ವಿವರಗಳು)

ಫೆ.27ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ
(ಪತ್ರಿಕಾಗೋಷ್ಠಿಯ ವಿವರಗಳು)

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಫೆ.27 ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನಕ್ಕೆ ಸುಮಾರು 2 ಲಕ್ಷ ಜನ ನೌಕರರು ಪಾಲ್ಗೊಳ್ಳಲಿದ್ದಾರೆ.

ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಆಶಯ ನುಡಿಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನುಡಿಯಲಿದ್ದಾರೆ.
ಅಧ್ಯಕ್ಷತೆ- ಸಿ.ಎಸ್.ಷಡಾಕ್ಷರಿ

ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ಆಡಳಿತದಲ್ಲಿ ಕಾರ್ಯಕ್ಷಮತೆ ಹಾಗೂ ನೌಕರರ ಆರೋಗ್ಯ ಸುಧಾರಣೆಗೆ ಸಂಬಂಧಿಸಿದ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.ರಾಜ್ಯ ಹೈಕೋರ್ಟ್ ನ ಗೌರವಾನ್ವಿತ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಉಪನ್ಯಾಸ ನೀಡಲಿದ್ದಾರೆ.ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘ ನಡೆದು ಬಂದ ದಾರಿ ಹಾಗೂ ಸಂಘದ ಸಾಧನೆಗಳ ಕುರಿತ “ನೌಕರರ ಸೇನೆ” ಸಾಕ್ಷ್ಯಚಿತ್ರ ಬಿಡುಗಡೆಯಾಗಲಿದೆ.

ಸರ್ಕಾರಕ್ಕೆ ಬೇಡಿಕೆಗಳೇನು;
1) 7ನೇ ವೇತನ ಆಯೋಗದ ವರದಿ ಪಡೆದು ಅದರ ಶಿಫಾರಸುಗಳನ್ನು ಜಾರಿಗೊಳಿಸುವುದು.
2) ಎನ್ ಪಿ ಎಸ್ ರದ್ದುಪಡಿಸಿ ಓಪಿಎಸ್ ಮರುಸ್ಥಾಪಿಸುವ ಸಲುವಾಗಿ ಮೊದಲನೇ ಹಂತದಲ್ಲಿ ಎನ್ ಪಿ ಎಸ್ ನೌಕರರ ವೇತನದಲ್ಲಿ ಕಟಾವಣೆಯಾಗುತ್ತಿರುವ ವಂತಿಗೆಯನ್ನು ಏಪ್ರಿಲ್ 2024 ರಿಂದ ಕಡಿತಗೊಳಿಸದಂತೆ ಸರ್ಕಾರಿ ಆದೇಶ ಹೊರಡಿಸುವುದು.
3)ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಯನ್ನು ಶೀಘ್ರ ಅನುಷ್ಠಾನಗೊಳಿಸುವುದು…