ಕವಿಸಾಲು
01
ಶಿವಮೊಗ್ಗ ತಾಲ್ಲೂಕಿನ ಅಂಗನವಾಡಿ- ಪ್ರಾಥಮಿಕ, ಪ್ರೌಢಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ತಹಶೀಲ್ದಾರ್ ವಿ.ಎಸ್.ರಾಜೀವ್ ಆದೇಶ
ಶಿವಮೊಗ್ಗ ತಾಲ್ಲೂಕಿನ ಅಂಗನವಾಡಿ- ಪ್ರಾಥಮಿಕ, ಪ್ರೌಢಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ತಹಶೀಲ್ದಾರ್ ವಿ.ಎಸ್.ರಾಜೀವ್ ಆದೇಶ
ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು .ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಕಾಲೇಜು ಗಳಿಗೆ ದಿನಾಂಕ 29-8-2025ರ ಶುಕ್ರವಾರದಂದು ರಜೆ ಘೋಷಿಸಿ ತಹಶೀಲ್ದಾರ್ ವಿ.ಎಸ್.ರಾಜೀವ್ ಆದೇಶಿಸಿದ್ದಾರೆ.
ಈ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿಸಿದ ಶಾಲಾ ಮುಖ್ಯಸ್ಥರು ಗಳಿಗೆ ತಿಳಿಸಿದ್ದಾರೆ.