ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ;* *ಆರೋಪಿಗೆ 20 ವರ್ಷ ಕಠಿಣ ಸಜೆ*

*ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ;*

*ಆರೋಪಿಗೆ 20 ವರ್ಷ ಕಠಿಣ ಸಜೆ*

ಅಪ್ರಾಪ್ತ ವಯಸ್ಸಿನ 17 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮಗ್ಗದ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಸಜೆ ಮತ್ತು 75 ಸಾವಿರ ರೂ.,ಗಳ ದಂಡ ವಿಧಿಸಿ ಆದೇಶಿಸಿದೆ.

*2022 ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ವ್ಯಕ್ತಿಯೊಬ್ಬನು *17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ್ದಾನೆಂದು* ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಮಾಳೂರು ಪೊಲೀಸ್ ಠಾಣೆಯಲ್ಲಿ *ಕಲಂ 376(2)(ಎನ್),‌ 366, 363 ಐಪಿಸಿ ಕಾಯ್ದೆ ಹಾಗೂ ಕಲಂ 06 ಪೋಕ್ಸೋ ಕಾಯ್ದೆ* ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖಾಧಿಕಾರಿಗಳಾದ * ಪ್ರವೀಣ್ ನೀಲಮ್ಮನವರ್ , ಸಿಪಿಐ* ಮಾಳೂರು ವೃತ್ತ* ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ *ಆರೋಪಿಯ ವಿರುದ್ಧ ದೋಷಾರೋಪಣಾ* ಪತ್ರವನ್ನು ಸಲ್ಲಿಸಿದ್ದರು.

ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ * ಶ್ರೀಧರ್ ಹೆಚ್. ಆರ್, ಸರ್ಕಾರಿ ಅಭಿಯೋಜಕರವರು* ವಾದ ಮಂಡಿಸಿದ್ದು, *ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1 ಶಿವಮೊಗ್ಗದಲ್ಲಿ* ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಢ ಪಟ್ಟ ಹಿನ್ನೆಲೆಯಲ್ಲಿ, ಆ.30 ರಂದು *ನ್ಯಾಯಾಧೀಶರಾದ ನಿಂಗನ ಗೌಡ ಭ ಪಾಟೀಲ್* ರವರು ಪ್ರಕರಣದ *ಆರೋಪಿತನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 75,000/- ದಂಡ ವಿಧಿಸಿ* ಹಾಗೂ *ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಶಿವಮೊಗ್ಗದಿಂದ ಸಂತ್ರಸ್ತ್ರ ಬಾಲಕಿಗೆ 4,00,000/- ರೂ ಪರಿಹಾರವನ್ನು ನೀಡುವಂತೆ* ಆದೇಶಿಸಿದ್ದಾರೆ.