*ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ನೂತನ ಕಟ್ಟಡಗಳನ್ನು ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*
*ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ನೂತನ ಕಟ್ಟಡಗಳನ್ನು ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*

ಪೂಜ್ಯಶ್ರೀ ಅನ್ನದಾನ ಮಹಾಶಿವಯೋಗಿಗಳವರ ದಿವ್ಯ ಪ್ರಕಾಶದಲ್ಲಿ ಜಗದ್ಗುರು ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳವರ ಸಂಕಲ್ಪದ ಮೇರೆಗೆ ಗದಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ “ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ನೂತನ ಕಟ್ಟಡಗಳನ್ನು ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.
ಬಳಿಕ ಸುತ್ತೂರು ಶ್ರೀಮಠದ ಪರಮಪೂಜ್ಯ ಜಗದ್ಗುರುಗಳಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ನೆರೆದಿದ್ದ ಸಭಿಕರನ್ನುದ್ದೇಶಿಸಿ ಮಾತನಾಡಿದರು.
ಗದಗ ಜಿಲ್ಲೆಯ ಹಾಲಕೇರಿ ಶ್ರೀ ಅನ್ನದಾನೇಶ್ವರ ಮಠವು ಅನೇಕ ವರ್ಷಗಳ ಇತಿಹಾಸ ಹೊಂದಿದೆ. ಈ ಶ್ರೀಮಠವು ಅನ್ನದಾಸೋಹದ ಜೊತೆಗೆ ಅಕ್ಷರ ದಾಸೋಹವನ್ನು ಮಾಡಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದೆ ಎಂದರು.
ಕಾರ್ಯಕ್ರಮದಲ್ಲಿ ರೋಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಎಸ್ ಪಾಟೀಲ್, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಕಾರಜೋಳ, ಕುಷ್ಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಅಮರೇಗೌಡ ಬಯ್ಯಾಪುರ ಸೇರಿದಂತೆ ರಾಜ್ಯದ ವಿವಿಧ ಮಠಗಳ ಹರ-ಗುರು-ಚರ ಮೂರ್ತಿಗಳು, ಜನಪ್ರತಿನಿಧಿಗಳು, ಗಣ್ಯರು, ಶಾಲಾ ಸಿಬ್ಬಂದಿ ವರ್ಗದವರು, ಪದಾಧಿಕಾರಿಗಳು ಹಾಗೂ ಶ್ರೀಮಠದ ಸಕಲ ಭಕ್ತಾಧಿಗಳು ಹಾಗೂ ಮುದ್ದು ಮಕ್ಕಳು ಹಾಜರಿದ್ದರು.