ಪತ್ರಕರ್ತರ ಸಂಘದ ಚುನಾವಣೆ; ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ನೇಮಕ

ಪತ್ರಕರ್ತರ ಸಂಘದ ಚುನಾವಣೆ;

ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ )

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆ ನಡೆಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಅವರು ನೇಮಕಗೊಂಡಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಹತ್ತು ಸಾವಿರಕ್ಕೂ ಹೆಚ್ಚಿನ ಪತ್ರಕರ್ತ ಸದಸ್ಯರನ್ನು ಹೊಂದಿದ್ದು, ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಎಲ್ಲಾ ಸಂಘದ ಎಲ್ಲಾ ಜಿಲ್ಲಾ ಸಮಿತಿಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ.
, ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ.

ಅಭಿನಂದನೆಗಳು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ನೇಮಕಗೊಂಡಿರುವ ಎನ್.ರವಿಕುಮಾರ್ ಟೆಲೆಕ್ಸ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಕೆ ವಿ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ವಿ ಟಿ , ಅವರು ಅಭಿನಂದನೆ ಸಲ್ಲಿಸಿದ್ದಾರೆ..