*ಕಣ್ಣಿಗೆ ಖಾರದ ಪುಡಿ ಎರಚಿ ಮರ್ಡರ್*
*ಕಣ್ಣಿಗೆ ಖಾರದ ಪುಡಿ ಎರಚಿ ಮರ್ಡರ್*
ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಾಡಹಗಲೇ ಯುವಕನ ಬರ್ಬರ ಹತ್ಯೆ (Murder) ಮಾಡಿರುವ ಘಟನೆ ನಗರದ ವಸ್ತು ಪ್ರದರ್ಶನದ ಮುಂಭಾಗ ನಡೆದಿದೆ.
ಕ್ಯಾತಮಾರನಹಳ್ಳಿ ನಿವಾಸಿ ಗಿಲ್ಕಿ ವೆಂಕಟೇಶ್ ಮೃತ ವ್ಯಕ್ತಿಯಾಗಿದ್ದು, ಕಾರಿನಲ್ಲಿ ಬಂದಿದ್ದ 5-6 ಜನ ದುಷ್ಕರ್ಮಿಗಳು ಕೃತ್ಯ ನಡೆಸಿದ್ದಾರೆ.
ರೌಡಿಶೀಟರ್ ಕಾರ್ತಿಕ್ ಜೊತೆ ವೆಂಕಟೇಶ್ ಗುರುತಿಸಿಕೊಂಡಿದ್ದರು ಎನ್ನಲಾಗಿದ್ದು, ಐದು ತಿಂಗಳ ಹಿಂದೆ ಕಾರ್ತಿಕ್ ಕೊಲೆಯಾಗಿದ್ದ. ಇವರಿಬ್ಬರ ನಡುವೆ ಹಣಕಾಸಿನ ವ್ಯವಹಾರ ಇತ್ತು ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ನೀಡಿದ್ದಾರೆ.