ಮಂಗಳೂರಿನಲ್ಲಿ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ ಸಭೆಯಲ್ಲಿ ಏನೆಲ್ಲ ಚರ್ಚೆ ನಡೆಯಿತು?

ಮಂಗಳೂರಿನಲ್ಲಿ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ

ಸಭೆಯಲ್ಲಿ ಏನೆಲ್ಲ ಚರ್ಚೆ ನಡೆಯಿತು?

ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ ಇಂದು ಮಂಗಳೂರಿನ ಒಸಿಯನ್ parls ಹೋಟೆಲ್ ನಲ್ಲಿ ರಾಜ್ಯ ಮಟ್ಟದ ಮುಖಂಡರ ಹಾಗೂ ವಿಭಾಗೀಯ ಜಿಲ್ಲಾಧ್ಯಕ್ಷರುಗಳ ಸಭೆಯು ಶಿಕ್ಷಣ ಮಂತ್ರಿ ಎಸ್.ಮಧು ಬಂಗಾರಪ್ಪರ ಉಪಸ್ಥಿತಿಯಲ್ಲಿ ನಡೆಸಲಾಯಿತು.

*ಸಾಮಾಜಿಕ ನ್ಯಾಯ ಸಂವಿಧಾನ ಬದ್ಧವಾದ ಹಕ್ಕು ನಾವೆಲ್ಲ ಒಂದು ಎಂಬ ಘೋಷಣೆಯ ಅಡಿಯಲ್ಲಿ ಈ ಭಾಗದ ಎಲ್ಲ ವರ್ಗದ ಮುಖಂಡರು ಭಾಗವಹಿಸಿ ಸಮಗ್ರವಾಗಿ ಚರ್ಚಿಸಿ, ಸಮೀಕ್ಷೆಯಲ್ಲಿ ಬರುವ ಅಂಕಿ ಅಂಶವೆ ಮಾನದಂಡ* ನಾವೆಲ್ಲರೂ ಸಕ್ರಿಯವಾಗಿ ಗಣತಿ ಕಾರ್ಯದಲ್ಲಿ ಭಾಗವಹಿಸಿ ಗಣತಿಯನ್ನು ವಿರೋಧಿಸುವ ಪಟ್ಟಭದ್ರ ಶಕ್ತಿಗಳ ದುರಾಲೋಚನೆಯನ್ನು ಜನರಿಗೆ ಮನವರಿಕೆ ಮಾಡಿ ಕೊಡುವ ದೃಷ್ಟಿಯಿಂದ ತಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲ ಮುಖಂಡರು ಸೂಚಿಸಿದರು.

ಅದರಂತೆ ಸಭೆಯಲ್ಲಿ ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಯಿತು.

ಹಿಂದುಳಿದ ವರ್ಗಗಳ ರಾಜ್ಯಧ್ಯಕ್ಷರು ಹಾಗೂ ಶಿಕ್ಷಣ ಸಚಿವರಾದ ಎಸ್. ಮಧು ಬಂಗಾರಪ್ಪ, ವಿಧಾನಪರಿಷತ್ತಿನ ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಮಾಜಿ ಸಚಿವರಾದ ವಿನಯ್ ಸೊರಕೆ, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣನಾಯ್ಕ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಮಮತಾ ಗಟ್ಟಿ, ನಾರಾಯಣ ಗುರುಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷರು ಹಾಗೂ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್, ಮೆಸ್ಕಾಂ ನಿಗಮದ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್‌ ಕುಮಾರ್‌, ಎಐಸಿಸಿ ಕಾರ್ಯದರ್ಶಿ ಶ್ರೀ ಪಿ.ವಿ ಮೋಹನ್, ಮುಖ್ಯಮಂತ್ರಿಯವರ ವೈದ್ಯಕೀಯ ಸಲಹೆಗಾರರಾದ ಡಾ ರವಿ ಕುಮಾರ್, ಕಾಂಗ್ರೆಸ್ ಮುಖಂಡರಾದ ರವಿ ಬೋಸರಾಜ್, ಪದ್ಮರಾಜ್, ರಕ್ಷಿತ್ ಶಿವರಾಂ ರಾಜ್ಯ ಸಂಯೋಜಕರಾದ ಜಿ.ಡಿ ಮಂಜುನಾಥ್ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ರಮೇಶ್ ಶೆಟ್ಟಿ , ವಿವಿಧ ಜಿಲ್ಲಾಯ ಅಧ್ಯಕ್ಷರುಗಳು ಸೇರಿದಂತೆ ಅನೇಕ ಗಣ್ಯರು, ಮುಖಂಡರು ಹಾಗೂ ಮಹಿಳಾ ಮುಖಂಡರು ಸೇರಿದಂತೆ ಮತ್ತಿತರು ಹಾಜರಿದ್ದರು.