ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿ
ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿ ನವೆಂಬರ್ 1 ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆಗಳನ್ನು ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು. ಅಪರ ಜಿಲ್ಲಾಧಿಕಾರಿಗಳು, ಜಿ.ಪಂ. ಉಪ ಕಾರ್ಯದರ್ಶಿ,…