![ಆಪರೇಷನ್ ಕಮಲ ಬೇಡ ಅಂದ್ರು ಮೋದಿ? ;ಆರ್.ಟಿ.ವಿಠಲಮೂರ್ತಿ ಬರಹ](https://malenaduexpress.com/wp-content/uploads/2024/02/FB_IMG_1708390601015-600x400.jpg)
ಆಪರೇಷನ್ ಕಮಲ ಬೇಡ ಅಂದ್ರು ಮೋದಿ? ;ಆರ್.ಟಿ.ವಿಠಲಮೂರ್ತಿ ಬರಹ
ಆಪರೇಷನ್ ಕಮಲ ಬೇಡ ಅಂದ್ರು ಮೋದಿ? ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಮೊನ್ನೆ ದಿಲ್ಲಿಗೆ ಹೋಗಿದ್ದ ರಾಜ್ಯ ಬಿಜೆಪಿಯ ಟಾಪ್ ಲೀಡರುಗಳಿಗೆ ವರಿಷ್ಟರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವನ್ನು ಯಾವ ಕಾರಣಕ್ಕೂ ಅಲುಗಾಡಿಸುವುದಿಲ್ಲ ಎಂಬುದು ಈ ಸಂದೇಶ. ಅಂದ ಹಾಗೆ ಕೆಲವೇ ಕಾಲದ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರವನ್ನು ಉರುಳಿಸುವ ವಿಷಯದಲ್ಲಿ ರಾಜ್ಯದ ಕೆಲ ಬಿಜೆಪಿ ನಾಯಕರು ಉತ್ಸುಕರಾಗಿದ್ದರು.ವರಿಷ್ಟರು ಅನುಮತಿ ನೀಡಿದರೆ ಸಾಕು,ಸರ್ಕಾರ ಉರುಳಿಸುವ ಜವಾಬ್ದಾರಿ ನಮ್ಮದು ಅಂತ ಆಪ್ತ ವಲಯಗಳಲ್ಲಿ ರಣೋತ್ಸಾಹ…