ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ**ಏನಿದರ ಅರ್ಥ?*
*ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ* *ಏನಿದರ ಅರ್ಥ?* ‘ತುಂಬಿದಕೊಡ ತುಳುಕೀತಲೇ ಪರಾಕ್’ ಇದು ನಾಡಿನ ಸುಪ್ರಸಿದ್ಧ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಪ್ರಸಕ್ತ ವರ್ಷದ ದೈವವಾಣಿ ಕಾರ್ಣಿಕರ ನುಡಿ. ಮೈಲಾರ ಸುಕ್ಷೇತ್ರದ ಡೆಂಕನಮರಡಿಯಲ್ಲಿ ರಾಜ್ಯ-ಹೊರ ರಾಜ್ಯದ ಹಲವೆಡೆಯಿಂದ ಆಗಮಿಸಿದ್ದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಭವಿಷ್ಯವಾಣಿ ಅನುರಣಿಸಿತು. ಕಳೆದ 11 ದಿನಗಳ ಉಪವಾಸ ವ್ರತ ಆಚರಿಸಿದ ಗೊರವಪ್ಪ ರಾಮಪ್ಪ ಅವರನ್ನು ಡೆಂಕನಮರಡಿಯ ಸಿಂಹಾಸನ ಕಟ್ಟೆಯಿಂದ ಕಾರ್ಣಿಕದ ಸ್ಥಳಕ್ಕೆ ಮೆರವಣಿಗೆ…