ಮಾ. 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ*
*ಮಾ. 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ* ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪ್ಪ ಎಸ್ ಗುಂಡಪಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ದತೆ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ…