ಶಿವಮೊಗ್ಗದಲ್ಲಿ ಮತ್ತೊಂದು ಹೊಸ ವಿಮಾನ ನಿಲ್ದಾಣ; ಎಲ್ಲಿ? ಯಾವಾಗ?*
*ಶಿವಮೊಗ್ಗದಲ್ಲಿ ಮತ್ತೊಂದು ಹೊಸ ವಿಮಾನ ನಿಲ್ದಾಣ; ಎಲ್ಲಿ? ಯಾವಾಗ?* ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರಿನಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಒತ್ತಿನೆಣೆಯಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವರು ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಬೆಂಗಳೂರಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ರಾಘವೇಂದ್ರ, ಶಿವಮೊಗ್ಗ…