ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣ ಹೆಚ್ಚದಂತೆ ಎಚ್ಚರಿಕೆ ವಹಿಸಿ: ತಹಶೀಲ್ದಾರ್ ವಿ.ಎಸ್.ರಾಜೀವ್*
*ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣ ಹೆಚ್ಚದಂತೆ ಎಚ್ಚರಿಕೆ ವಹಿಸಿ: ತಹಶೀಲ್ದಾರ್ ವಿ.ಎಸ್.ರಾಜೀವ್* ಶಿವಮೊಗ್ಗ, ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ ಎಚ್ಚರಿಕೆ ವಹಿಸಬೇಕು. ಕೆಎಫ್‌ಡಿ ಕುರಿತು ಜನರಲ್ಲಿರುವ ಭಯ ಮುಕ್ತಗೊಳಿಸಿ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕೆಂದು ತಹಶೀಲ್ದಾರ್ ವಿ.ಎಸ್.ರಾಜೀವ್ ಸಲಹೆ ನೀಡಿದರು. ಬುಧವಾರ ಶಿವಮೊಗ್ಗ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಹಾಗೂ ವಿವಿಧ ಇಲಾಖೆಗಳ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರದ ಭಾಗದಲ್ಲಿ…