Gm ಶುಭೋದಯ💐 *ಕವಿಸಾಲು* ಪ್ರೇಮಿಗಳ ಮೌನದ ಮಧ್ಯೆ ಜಗತ್ತಿನ ಅಷ್ಟೂ ಮಾತುಗಳು ಸಂಚರಿಸುತ್ತವೆ! – *ಶಿ.ಜು.ಪಾಶ* 8050112067 (5/3/24)
ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕು-ಮುಖ್ಯಮಂತ್ರಿಗಳೊಂದಿಗೆ ಸಭೆ : ಮಧು ಬಂಗಾರಪ್ಪ*
*ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕು-ಮುಖ್ಯಮಂತ್ರಿಗಳೊಂದಿಗೆ ಸಭೆ : ಮಧು ಬಂಗಾರಪ್ಪ* ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕು ಸಮಸ್ಯೆ ಪರಿಹಾರ, ಅರಣ್ಯ ಭೂಮಿ ಒತ್ತುವರಿ ಸಕ್ರಮ, ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕಿಗೆ ಸಂಬಂಧಿಸಿದ ವಿಷಯಗಳನ್ನು ಶೀಘ್ರವೇ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾಕರಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅರಣ್ಯ ಮತ್ತು ಕಂದಾಯ…
ಎಪಿಎಂಸಿ ಮಳಿಗೆಯೊಂದರ ಸಂಬಂಧ 50,000₹ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಎ.ಯೋಗೀಶ್*
*ಎಪಿಎಂಸಿ ಮಳಿಗೆಯೊಂದರ ಸಂಬಂಧ 50,000₹ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಎ.ಯೋಗೀಶ್* ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಹಾಗೂ ಕಛೇರಿಯಲ್ಲಿ ಎಪಿಎಂಸಿ ಮಳಿಗೆ ಮಂಜೂರು ಮಾಡಲು ೨ ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಹಾಗೂ ಮೇಲ್ವಿಚಾರಕ ಯೋಗೀಶ್ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು, ೫೦ ಸಾವಿರ ಲಂಚ ಸ್ವೀಕರಿಸುವ ವೇಳೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊಸನಗರ…
ಸರ್ಕಾರಿ ಕ್ರೀಡಾಕೂಟ ಉದ್ಘಾಟನೆಗೆ ಮುನ್ನ ಮೀಟ್ ದ ಪ್ರೆಸ್* ಬಿಜೆಪಿಗರಿಗೆ ಬಾಲ ಬಿಚ್ಚಲು ಬಿಡುವುದಿಲ್ಲ; ಸಚಿವ ಮಧು ಬಂಗಾರಪ್ಪ
*ಸರ್ಕಾರಿ ಕ್ರೀಡಾಕೂಟ ಉದ್ಘಾಟನೆಗೆ ಮುನ್ನ ಮೀಟ್ ದ ಪ್ರೆಸ್* ಬಿಜೆಪಿಗರಿಗೆ ಬಾಲ ಬಿಚ್ಚಲು ಬಿಡುವುದಿಲ್ಲ; ಸಚಿವ ಮಧು ಬಂಗಾರಪ್ಪ ಕಾಂಗ್ರೆಸ್ ಸರ್ಕಾರ ಒಳ್ಳೆಯ ಕೆಲಸಗಳನ್ನು ಮಾಡುತ್ತಿದೆ. ಬಿಜೆಪಿಯವರ ಟೀಕೆಗೆ ನಾವೇನು ಜಗ್ಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿಯವರಿಗೆ ಬಾಲಬಿಚ್ಚಲು ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು. ನೆಹರೂ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವಿನಾಕಾರಣ ಬಾಂಬ್ ಬ್ಲಾಸ್ಟ್ ಮತ್ತು ಪಾಕಿಸ್ತಾನ ಪರ ಘೋಷಣೆಯ ವಿಚಾರಗಳನ್ನು ಎತ್ತಿತ್ತಿದ್ದಾರೆ. ಈಗಾಗಲೇ ಸರ್ಕಾರ ಸ್ಪಷ್ಟವಾಗಿ ಹೇಳಿದರು. ಯಾರೇ ಆಗಲಿ…
ಎಂಎಡಿಬಿ ಅಧ್ಯಕ್ಷರಾಗಿ ಆರ್ಎಂಎಂ ಅಧಿಕಾರ ಸ್ವೀಕಾರ ‘ಆರ್ಥಿಕ ಮುಗ್ಗಟ್ಟಿನ ಪ್ರಾಧಿಕಾರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ”
ಎಂಎಡಿಬಿ ಅಧ್ಯಕ್ಷರಾಗಿ ಆರ್ಎಂಎಂ ಅಧಿಕಾರ ಸ್ವೀಕಾರ ‘ಆರ್ಥಿಕ ಮುಗ್ಗಟ್ಟಿನ ಪ್ರಾಧಿಕಾರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ” ಶಿವಮೊಗ್ಗ,ಮಾ.೪: ಕಾಂಗ್ರೆಸ್ಸಿನ ಹಿರಿಯ ಮುಖಂಡ ತೀರ್ಥಹಳ್ಳಿಯ ಡಾ.ಆರ್.ಎಂ. ಮಂಜುನಾಥಗೌಡರು ಇಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ(ಎಂಎಡಿಬಿ)ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಆರ್.ಎಂ.ಮಂಜುನಾಥ ಗೌಡರು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಎಂಬುವುದು ದಿವಂಗತ ಬಂಗಾರಪ್ಪನವರ ಕನಸು. ನನಗೆ ಕೊಟ್ಟ ಈ ಜವಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವೆ. ಮಲೆನಾಡು ಅಭಿವೃದ್ಧಿ ಮಂಡಳಿ ಎಂಬುವುದು ಬಹುದೊಡ್ಡದಾದ ಪ್ರಾಧಿಕಾರವಾಗಿದೆ. ಇಲ್ಲಿ ಬೇಕಾದಷ್ಟು ಕೆಲಸವಿದೆ ಎಂಬುವುದು ನಿಜ. ನಿಭಾಯಿಸುವುದು ಅಷ್ಟು ಸುಲಭವಲ್ಲ…
ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟಿಸಿದ ಜಿಲ್ಲಾ ಸಚಿವರು *ಕ್ರೀಡೆ ನಮ್ಮ ಜೀವನದ ಅಗತ್ಯಗಳಲ್ಲಿ ಒಂದಾಗಿದೆ : ಎಸ್.ಮಧು ಬಂಗಾರಪ್ಪ*
ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟಿಸಿದ ಜಿಲ್ಲಾ ಸಚಿವರು *ಕ್ರೀಡೆ ನಮ್ಮ ಜೀವನದ ಅಗತ್ಯಗಳಲ್ಲಿ ಒಂದಾಗಿದೆ : ಎಸ್.ಮಧು ಬಂಗಾರಪ್ಪ* ಕ್ರೀಡೆಗಳು ಮಾನವ ಜೀವನದ ಅಗತ್ಯಗಳಲ್ಲಿ ಒಂದಾಗಿದ್ದು ಪ್ರತಿದಿನ ನಮ್ಮ ದೈನಂದಿನ ಚಟುವಟಿಕೆಗಳ ಜೊತೆ ಯಾವುದಾದರೂ ಕ್ರೀಡೆಯನ್ನು ಆಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಶಿವಮೊಗ್ಗ ಇವರ…
ಸಂಗೀತ ರವಿರಾಜ್ ಅಂಕಣ;ಒಲೆ ಉರಿಸುವ ಕಲೆಯ – ಲಯ , ರಾಗ, ತಾಳ…
ಒಲೆ ಉರಿಸುವ ಕಲೆಯ – ಲಯ , ರಾಗ, ತಾಳ. ಕಾಲ ಯಾವುದಾದರೇನು ಒಲೆ ಉರಿಯಲೇ ಬೇಕು ತಾನೆ? ಅದೇ ಉರಿಯಲ್ಲಿ ನಾವೂ ಬೇಯುತ್ತ ಅಡುಗೆ ಮಾಡಲೇಬೇಕಾದ ಅನಿವಾರ್ಯತೆ. ಮಳೆಗಾಲಕ್ಕೆಂದು ಸೌದೆ , ಕಾಯಿ ಚೆಪ್ಪು , ತೆಂಗಿನ ಗರಿಗಳನ್ನೆಲ್ಲ ಸಂಗ್ರಹಿಸಿ ಇಟ್ಟದ್ದು ಆಯ್ತು , ಅದು ಅದರಷ್ಟಕ್ಕೆ ಅತಿಯಾದ ಗಾಳಿ ಮಳೆಗೆ ಥಂಡಿ ಹಿಡಿದದ್ದು ಆಯ್ತು ! ಅದನ್ನುರಿಸಿ ಅಡುಗೆ ಮಾಡುವ ಮಹಿಳೆಯರ ಪಾಡು , ಅವಳಿಗಷ್ಟೇ ತಿಳಿದ ಹಾಡು. ಮಳೆಗಾಲದ ಸುಂದರವಾದ ,…
ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿ : ಸ್ನೇಹಲ್ ಸುಧಾಕರ ಲೋಖಂಡೆ*
*ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿ : ಸ್ನೇಹಲ್ ಸುಧಾಕರ ಲೋಖಂಡೆ* ಜಿಲ್ಲೆಯ ೦ ಯಿಂದ ೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು. ಈ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಕರೆ ನೀಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು…
ಇವತ್ತು 0 ಯಿಂದ 5 ರೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿರಿ: ಡಿಸಿ*
*0 ಯಿಂದ 5 ರೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿರಿ: ಡಿಸಿ* ಮಾ.3 ರ ಭಾನುವಾರದಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು 0 ಯಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೋರಿದ್ದಾರೆ. 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಮಾ.3 ರಂದು ಪುನಃ ಪೋಲಿಯೋ ಹಾಕಿಸಬೇಕು. ಮಾ.03 ರಂದು 120626 ಮಕ್ಕಳಿಗೆ…