ಕೈಗೆಟಕುವ ದರದಲ್ಲಿ ನಿವೇಶನ ಹಂಚಿಕೆ ಗುರಿ : ಸೂಡಾ ಅಧ್ಯಕ್ಷ ಸುಂದರೇಶ್*
*ಕೈಗೆಟಕುವ ದರದಲ್ಲಿ ನಿವೇಶನ ಹಂಚಿಕೆ ಗುರಿ : ಸೂಡಾ ಅಧ್ಯಕ್ಷ ಸುಂದರೇಶ್* ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಇಂದು ಸೂಡಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸೂಡಾ ವ್ಯಾಪ್ತಿಯಲ್ಲಿ…