ಎಂಎಸ್‌ಎಂಇ ಗಳ ಕಾರ್ಯಕ್ಷಮತೆ-ವೇಗ ಹೆಚ್ಚಿಸಲು ಕಾರ್ಯಕ್ರಮ; ಗಣೇಶ್ ಆರ್*
*ಎಂಎಸ್‌ಎಂಇ ಗಳ ಕಾರ್ಯಕ್ಷಮತೆ-ವೇಗ ಹೆಚ್ಚಿಸಲು ಕಾರ್ಯಕ್ರಮ : ಗಣೇಶ್ ಆರ್* ಶಿವಮೊಗ್ಗ, ಹೆಚ್ಚಿನ ಉದ್ಯೋಗಾವಕಾಶ ಮತ್ತು ಆರ್ಥಿಕತೆಗೆ ಉತ್ತಮ ಕೊಡುಗೆ ನೀಡುತ್ತಿರುವ ಎಂಎಸ್‌ಎAಇ ಗಳ ಕಾರ್ಯಕ್ಷಮತೆ ಮತ್ತು ವೇಗ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಗಣೇಶ್ ಆರ್ ಹೇಳಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಮೊಗ್ಗ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ…