ಶಿವಮೊಗ್ಗ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಎರಡು ದಿನ ಮಳೆ*
*ಶಿವಮೊಗ್ಗ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಎರಡು ದಿನ ಮಳೆ* ಕರ್ನಾಟಕದಲ್ಲಿ ಕೆಲವೆಡೆ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದರೂ, ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕ್ಯಾಸಲ್ರಾಕ್, ಜೋಯಿಡಾ, ಕುಮಟಾ, ಯಲ್ಲಾಪುರ, ಕಾರ್ಕಳ, ಸಂಕೇಶ್ವರ, ಶಿರಹಟ್ಟಿ, ಲಕ್ಷ್ಮೀಪುರ, ಧಾರವಾಡ, ಕೆಆರ್…