ಮುಖ್ಯ ರಸ್ತೆಗಳಲ್ಲಿ ವಾಹನ ನಿಲುಗಡೆ ತಡೆಯಾಜ್ಞೆ-ಬಹುಹಂತದ ಕಾರ್ ಪಾರ್ಕಿಂಗ್ ಕಟ್ಟಡದಲ್ಲಿ ವಾಹನಗಳ ಪಾರ್ಕಿಂಗ್
ಮುಖ್ಯ ರಸ್ತೆಗಳಲ್ಲಿ ವಾಹನ ನಿಲುಗಡೆ ತಡೆಯಾಜ್ಞೆ-ಬಹುಹಂತದ ಕಾರ್ ಪಾರ್ಕಿಂಗ್ ಕಟ್ಟಡದಲ್ಲಿ ವಾಹನಗಳ ಪಾರ್ಕಿಂಗ್ ಶಿವಮೊಗ್ಗ ನಗರದ ಮುಖ್ಯ ರಸ್ತೆಗಳಲ್ಲಿ ವಾಹನ ನಿಲುಗಡೆ ತಡೆಯಾಜ್ಞೆಯನ್ನು ಜಾರಿಗೊಳಿಸುವುದು ಹಾಗೂ ಬಹುಹಂತದ ಕಾರ್ ಪಾರ್ಕಿಂಗ್ ಕಟ್ಟಡದಲ್ಲಿ ವಾಹನಗಳ ಪಾರ್ಕಿಂಗ್ ಮಾಡಲು ಕ್ರಮ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆಯವರು ಆದೇಶಿಸಿರುತ್ತಾರೆ. ನಗರದ ಪ್ರಮುಖ ರಸ್ತೆಗಳಾದ ಬಿಹೆಚ್ ರಸ್ತೆ(ರಾಯಲ್ ಆರ್ಕಿಡ್ ಯಿಂದ ಕರ್ನಾಟಕ ಸಂಘ ಸಿಗ್ನಲ್ವರೆಗೆ) ಶಿವಪ್ಪನಾಯಕ ಪ್ರತಿಮೆಯಿಂದ ಗಾಂಧಿ ಬಜಾರ್ ನಾಲ್ಕನೇ ಅಡ್ಡರಸ್ತೆವರೆಗೆ, ಗೋಪಿ ವೃತ್ತದಿಂದ ಅಮೀರ್ ಅಹ್ಮದ್ ವೃತ್ತದವರೆಗೆ, ಹಳೇ…


