ಕರ್ನಾಟಕದ ಬೀಚ್ಗಳಲ್ಲಿಯೂ ಗೋವಾ ರೀತಿ ಮದ್ಯ ಮಾರಾಟ?
ಕರ್ನಾಟಕದ ಬೀಚ್ಗಳಲ್ಲಿಯೂ ಗೋವಾ ರೀತಿ ಮದ್ಯ ಮಾರಾಟ? ರಾಜ್ಯದ ಬೀಚ್ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ರಾಜ್ಯದ ಕರಾವಳಿಯ ಬೀಚ್ಗಳಲ್ಲಿ ಕೂಡ ಗೋವಾದ ಮಾದರಿಯಲ್ಲಿ ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ. ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್ಗಳಲ್ಲಿ ಟೆಂಟ್ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ…