Headlines

ಮಹಾರಾಷ್ಟ್ರದ ನಾಸಿಕ್ ನಲ್ಲಿ ಸೆರೆ ಸಿಕ್ಕ ಬಿಜೆಪಿ ಸೋಷಿಯಲ್ ಮೀಡಿಯಾ ಮುಖ್ಯಸ್ ಶರತ್ ಕಲ್ಯಾಣಿ?*

*ಮಹಾರಾಷ್ಟ್ರದ ನಾಸಿಕ್ ನಲ್ಲಿ ಸೆರೆ ಸಿಕ್ಕ ಬಿಜೆಪಿ ಸೋಷಿಯಲ್ ಮೀಡಿಯಾ ಮುಖ್ಯಸ್ ಶರತ್ ಕಲ್ಯಾಣಿ?* ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಸಿಪಿಐ ಭರತ್ ಮತ್ತು ತಂಡ ಶರತ್ ಕಲ್ಯಾಣಿಯನ್ನು ಮಹಾರಾಷ್ಟ್ರದ ನಾಸಿಕ್ ನಲ್ಲಿ ಬಂಧಿಸಿರುವ ಸುದ್ದಿ ಬಂದಿದೆ. ಪೊಲೀಸರಿನ್ನೂ ಅಧಿಕೃತಗೊಳಿಸಿಲ್ಲ. ಮಹಿಳೆಗೆ ದೈಹಿಕವಾಗಿ ಹಾಗೂ ಆರ್ಥಿಕವಾಗಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ ಬಿಜೆಪಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥ ಶರತ್ ಕಲ್ಯಾಣಿ ಕಣ್ಮರೆಯಾಗಿದ್ದ. ಇದೀಗ ಆತನನ್ನು ಬಂಧಿಸಿ ಶಿವಮೊಗ್ಗಕ್ಕೆ ಕರೆತರಲಾಗುತ್ತಿದೆ ಎಂದು ಸುದ್ದಿಮೂಲಗಳು ತಿಳಿಸಿವೆ.

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಹೃದಯದ ಗಾಯಗಳು ಮುಖದ ಮೇಲೆ ಕಾಣುವುದಿದ್ದಿದ್ದರೇ… ಕನ್ನಡಿಯೂ ಚೂರು ಚೂರೇ ಚೂರಾಗುತ್ತಿತ್ತು! – *ಶಿ.ಜು.ಪಾಶ* 8050112067 (4/8/24)

Read More

ಉಳ್ಳಿ ಫೌಂಡೇಶನ್ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬ ಆಚರಣೆ

ಉಳ್ಳಿ ಫೌಂಡೇಶನ್ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬ ಆಚರಣೆ  ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ಉಳ್ಳಿ ಫೌಂಡೇಶನ್ ವತಿಯಿಂದ ಶಿಕಾರಿಪುರದ ದೇವರಾಜ್ ಅರಸು ನಗರದ ಉರ್ದು ಶಾಲೆಯ ಮಕ್ಕಳಿಗೆ ಪುಸ್ತಕ, ಪೆನ್ನು ಹಾಗು ಲೇಖನ ಸಾಮಾಗ್ರಿಗಳನ್ನು ವಿತರಣೆ ಮಾಡುವ ಮೂಲಕ ಅರ್ಥ ಪೂರ್ಣವಾಗಿ ಹುಟ್ಟು ಹಬ್ಬ ಆಚರಿಸಲಾಯಿತು.* *ಈ ಸಂದರ್ಭದಲ್ಲಿ ಮಾತನಾಡಿದ ಉಳ್ಳಿ ಫೌಂಡೇಶನ್ ಅದ್ಯಕ್ಷರು ಹಾಗು ಪುರಸಭಾ ಸದಸ್ಯರಾದ ಉಳ್ಳಿ ದರ್ಶನ್ ರವರು, ನಮ್ಮ ನಾಯಕರು, ಗ್ಯಾರೆಂಟಿಗಳನ್ನು ಜಾರಿ ಮಾಡುವ ಮೂಲಕ…

Read More

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ*

*ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ* ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು (ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಸಂಯೋಜಕರ-01 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಎನ್.ಸಿ.ಡಿ. ಕ್ಲಿನಿಕ್ ಜಿಲ್ಲೆಯ ತಾ.ಅ./ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಎಂ.ಬಿ.ಬಿ.ಎಸ್. ವೈದ್ಯರ ಹುದ್ದೆಗೆ ವಿದ್ಯಾರ್ಹತೆ…

Read More

ಸಚಿವ ಮಧು ಬಂಗಾರಪ್ಪರವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು*ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಿತೂರಿಗೆ ಸೆಡ್ಡು ಹೊಡೀತೀವಿ…ವಿಜಯೇಂದ್ರನೇ ಭ್ರಷ್ಟಾಚಾರದಲ್ಲಿ ನಂಬರ್ ಒನ್

ಸಚಿವ ಮಧು ಬಂಗಾರಪ್ಪರವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು* ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಿತೂರಿಗೆ ಸೆಡ್ಡು ಹೊಡೀತೀವಿ… ವಿಜಯೇಂದ್ರನೇ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಇಡೀ ರಾಜ್ಯದಲ್ಲಿ ಮಳೆ ವಾತಾವರಣ ಚೆನ್ನಾಗಿದೆ. ಗುಡ್ಡ ಜರಿತ ಹುಷಾರಾಗಿ ಜನ ತಗೋಬೇಕು. ರೆಗ್ಯುಲರ್ ರಿವೀವ್ಸ್ ಮಾಡಬೇಕಿದೆ. ಮಾಡಲಾಗುತ್ತಿದೆ. ಅಧಿಕಾರಿಗಳು ಅಲರ್ಟ್ ಆಗಿದಾರೆ. ಮುಖ್ಯಮಂತ್ರಿಗಳು ಹೈ ಅಲರ್ಟ್ ಇರಲು ಹೇಳಿದ್ದಾರೆ ಎಲ್ಲರಿಗೂ… ಅನಧಿಕೃತ ಮನೆ ಹಾನಿ ಆದ್ರೂ ಪರಿಹಾರದ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗಿದೆ. ಹಿಂದೆ ಬಿಜೆಪಿಯವರೇ ಪ್ರಭಾವ ಬೀರಿ 5 ,ಲಕ್ಷ ತಗೊಂಡಿದಾರೆ.ತೀರಾ ಬಡವರಿಗೆ…

Read More

ಸ್ವಾತಂತ್ರ್ಯೋತ್ಸವ  ಆಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ

ಸ್ವಾತಂತ್ರ್ಯೋತ್ಸವ  ಆಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ ಆಗಸ್ಟ್ 15 ರಂದು ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿರುವ ಸ್ವಾತಂತ್ರö್ಯ ದಿನಾಚರಣೆ ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು, ಯಶಸ್ವಿಯಾಗಿ ಸ್ವಾತಂತ್ರೋತ್ಸವ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಸ್ವಾತಂತ್ರö್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಜಿ.ಪಂ…

Read More

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು : ಬೇಳೂರು ಗೋಪಾಲಕೃಷ್ಣ

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು : ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ: ಸರ್ವ ಋತು ಪ್ರವಾಸಿ ತಾಟವಾಗಿ ಜೋಗ ಜಲಾಶಯ ಅಭಿವೃದ್ಧಿ ಪಡಿಸಲಾಗುವುದು ಎಂದು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಲಿಂಗನಮಕ್ಕಿ ಜಲಾಶಯಕ್ಕೆ ಗುರುವಾರ ಪೂಜೆ ಸಲ್ಲಿಸಿ ಮಾತನಾಡಿದ ಅವರು ಜೋಗ ಜಲಪಾತ ಸುಂದರ ಪ್ರವಾಸಿತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕಾಮಗಾರಿಯನ್ನು ನಡೆಸಲಾಗುತ್ತಿದೆ‌. 183 ಕೋಟಿ ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು ಸರ್ಕಾರದಿಂದ 30ಕೋಟಿ ಅನುದಾನ ಬಿಡುಗಡೆಯಾಗಿದ್ದು…

Read More

ಎಸ್ ಪಿ ಮಿಥುನ್ ಕುಮಾರ್ ರವರು ಶಿವಮೊಗ್ಗದ ವಾಹನ ಸವಾರರಿಗೆ ಏನೆಂದು ಎಚ್ಚರಿಸಿದ್ದಾರೆ? ನೀವೇನು ಮಾಡಬೇಕು? ನೀವೇನು ಮಾಡಬಾರದು?ಇಲ್ಲಿದೆ ವಿಶೇಷ ಸೂಚನೆ…

ಎಸ್ ಪಿ ಮಿಥುನ್ ಕುಮಾರ್ ರವರು ಶಿವಮೊಗ್ಗದ ವಾಹನ ಸವಾರರಿಗೆ ಏನೆಂದು ಎಚ್ಚರಿಸಿದ್ದಾರೆ? ನೀವೇನು ಮಾಡಬೇಕು? ನೀವೇನು ಮಾಡಬಾರದು? ಇಲ್ಲಿದೆ ವಿಶೇಷ ಸೂಚನೆ…

Read More