ಗಾಂಜಾ ಬೆಳೆದ ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ*
*ಗಾಂಜಾ ಬೆಳೆದ ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ* ಸೊರಬ ತಾಲ್ಲೂಕು ಚಿಟ್ಟೂರು ಗ್ರಾಮದ ವಾಸಿಯಾದ ನಿಂಗರಾಜ ಬಿನ್ ಶಿವಪ್ಪ (47) ಇವರು ತಮ್ಮ ಶುಂಠಿ ಹೊಲದಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವ ಆರೋಪ ದೃಢಪಟ್ಟಿದ್ದು, ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಅಪರಾಧಿಗೆ ಕಠಿಣ ಕಾರಾಗೃಹ ವಾಸ ಶಿಕ್ಷೆ ನೀಡಿ ಆದೇಶಿಸಿರುತ್ತಾರೆ. ನಿಂಗರಾಜ ಬಿನ್ ಶಿವಪ್ಪ ಸರ್ವೇ ನಂ 180/06 ರಲ್ಲಿ ಶುಂಠಿ ಹೊಲದಲ್ಲಿ ಮಾರಾಟ ಮಾಡಿ ಲಾಭಗಳಿಸುವ ಉದ್ದೇಶದಿಂದ…